Belagavi NewsBelgaum NewsKannada NewsKarnataka News
ವಿಕಲಚೇತನನ ಮೇಲೆ ಪೊಲೀಸ್ ದೌರ್ಜನ್ಯ: ವರದಿ ಕೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ವಿಕಲಚೇತನನ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.
ಈ ಕುರಿತು ಪೊಲೀಸ್ ಆಯುಕ್ತರಿಗೆ ಸಚಿವರು ಪತ್ರ ಬರೆದಿದ್ದಾರೆ. ನಡು ರಸ್ತೆಯಲ್ಲಿ ರಾತ್ರಿ ವಿಕಲ ಚೇತನ ವ್ಯಕ್ತಿಗೆ ಪೊಲೀಸರು ಹಿಗ್ಗಾ ಮುಗ್ಗಾ ಥಳಿಸಿ, ಬೂಟುಗಾಲಿನಿಂದ ಒದ್ದು ರಾತ್ರಿಯಿಡೀ ಅಲ್ಲೇ ನರಳುವಂತೆ ಮಾಡಿದ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ವಿಚಾರಣೆ ನಡೆಸಿ, ತಪ್ಪಿತಸ್ಥ ಪೊಲೀಸರ ಮೇಲೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಚಿವರು ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ