ಪ್ರಗತಿವಾಹಿನಿ ಸುದ್ದಿ; ಹಾಸನ: ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ಹಾಸನ ಜಿಲ್ಲೆಯ ದಾಸರಕೊಪ್ಪಲಿಯಲ್ಲಿ ನಡೆದಿದೆ.
ಲೋಹಿತ್ ಚಾಕು ಇರಿತಕ್ಕೊಳಗಾದ ಪೊಲೀಸ್ ಕಾನ್ಸ್ ಟೇಬಲ್. ಲೋಹಿತ್ ಸಕಲೇಶಪುರ ನಗರದ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿದ್ದು, ಸಂಬಂಧಿಕರೊಬ್ಬರು ಸಾವನ್ನಪ್ಪಿದ ಕಾರಣಕ್ಕೆ ದಾಸರಕೊಪ್ಪಲಿ ಗ್ರಾಮಕ್ಕೆ ತೆರಳಿದ್ದರು. ಸಾವಿನ ಮನೆ ಬಳಿ ಕೆಲ ಯುವಕರ ಗುಂಪು ಗಲಾಟೆ ಮಾಡುತ್ತಿತ್ತು. ಈ ವೇಳೆ ಸ್ಥಳಕ್ಕೆ ತೆರಳಿ ಲೋಹಿತ್ ಗಲಾಟೆ ತಡೆದು ಯುವಕರಿಗೆ ಬುದ್ಧಿವಾದ ಹೇಳಿದ್ದಾರೆ.
ಈ ವೇಳೆ ಸ್ಥಳದಿಂದ ಹೊರಟ ಯುವಕರು ಬಳಿಕ ಮತ್ತೆ ವಾಪಸ್ ಬಂದು ಕಾನ್ಸ್ ಟೇಬಲ್ ಲೋಹಿತ್ ಗೆ ಚಾಕುವಿನಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕಾನ್ಸ್ ಟೇಬಲ್ ಲೋಹಿತ್ ರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಕು ಇರಿದ ಪ್ರಕರಣ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಆರೋಪಿಗಳಾದ ಪ್ರಕಾಶ್ ಹಾಗೂ ಪುನೀತ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು
https://pragati.taskdun.com/politics/lokayuktacomplaint-fileagainest-siddaramaih/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ