ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. 3 ದಿನಗಳ ಕಾಲ ಸೀಲ್ ಡೌನ್ ಮಾಡಿ ಸೆನಿಟೈಸರ್ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡ ನಂತರ ಕಚೇರಿ ತೆರೆಯಲು ನಿರ್ಧರಿಸಲಾಗಿದೆ.
ಎಟಿಎಸ್ ವಿಂಗ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಎಸ್ಐ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸಿಬ್ಬಂದಿಗೆ ಮನೆಯಿಂದಲೇ ಅಥವಾ ಹೊರಗಿನಿಂದ ಹೊರಗೇ ಕರ್ತವ್ಯಕ್ಕೆ ಹಾಜರಾಗಲು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ 90 ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಒಟ್ಟೂ 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. 870 ಪೊಲೀಸರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಸೀಲ್ ಡೌನ್ ಪ್ರದೇಶದಲ್ಲಿ ಕೆಲಸ ನಿರ್ವಹಿಸಲು ಪೊಲೀಸರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸರಿಗೆ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಲ್ಲದೆ, ಸೌಲಭ್ಯಗಳನ್ನೂ ಒದಗಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ