
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ತವ್ಯ ಮುಗಿಸಿ ತೆರಳುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ ಓರ್ವ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಕರ್ತವ್ಯ ಮುಗಿಸಿ ಹುದಲಿಯ ಮನೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಆನಂದ ಬುಧವಾರ ಹೆಣ್ಣು ನೋಡುವುದಕ್ಕೆ ಹೋಗುವವರಿದ್ದರು. ಆದರೆ ವಿಧಿಯ ಲೆಕ್ಕವೇ ಬೇರೆ ಇತ್ತು.
ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.