
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬಸ್ ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿದ ಪೊಲೀಸ್ ಪೇದೆಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಆರೋಪಿಯನ್ನು ಪೊಲೀಸ್ ಕಾನ್ಸ್ ಟೇಬಲ್ ರಾಜೀವ್ ಎಂದು ಗುರುತಿಸಲಾಗಿದೆ. ಮಧ್ಯದ ಅಮಲಿನಲ್ಲಿದ್ದ ರಾಜೀವ್ ಬಸ್ ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯವಗೈ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸ್ ಆಯುಕ್ತ ಮಹೇಶ್ ಅಗರ್ವಾಲ್ ಆದೇಶ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ