
ಪ್ರಗತಿವಾಹಿನಿ ಸುದ್ದಿ: ಜನರಿಗೆ ರಕ್ಷಣೆ ಕೊಡಬೇಕಾದ ಪೊಲೀಸರೇ ದುರ್ವರ್ತನೆ ತೋರಿದರೆ ಬೇಲಿಯೇ ಎದ್ದು ಹೊಲಮೆಯ್ದಂತೆ. ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯೊಬ್ಬಳು ದೂರು ನೀಡಲೆಂದು ಪೊಲೀಸ್ ಠಾಣೆಗೆ ಬಂದರೆ ಕಾನ್ಸ್ ಟೇಬಲ್ ಓರ್ವ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅರುಣ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಕಾನ್ಸ್ ಟೇಬಲ್ ಅರುಣ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ನಿವಾಸಿಯಾಗಿದ್ದು, ನೆರಮನೆಯ ವಿವಾಹಿತ ವ್ಯಕ್ತಿಯೋರ್ವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹಲ್ಲೆ ನಡೆಸಿದ್ದಾನೆ. ವಿಷಯವನ್ನು ಸಂತ್ರಸ್ತೆ ತನ್ನ ತಾಯಿಗೆ ತಿಳಿಸಿದ್ದಳು. ತಾಯಿ ಬೊಮ್ಮನಹಳ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ಸಂತ್ರಸೆಯನ್ನು ಪರಿಚಯಿಸಿಕೊಂಡ ಕಾನ್ಸ್ ಟೇಬಲ್ ಅರುಣ್, ನ್ಯಾಯಕೊಡಿಸುವುದಾಗಿ ಭರವಸೆ ನೀಡಿದ್ದ.
ಸಂತ್ರಸ್ತೆಗೆ ನ್ಯಾಯ ಕೊಡಿಸುತ್ತೇನೆ. ಕೆಲಸವನ್ನೂ ಕೊಡಿಸುವುದಾಗಿ ಹೇಳಿ ನಂಬಿಸಿದ್ದಾನೆ. ಕೆಲಸದ ಆಮಿಷವೊಡ್ಡಿ ಸಂತ್ರಸ್ತೆಯನ್ನು ಲಾಡ್ಜ್ ಗೆ ಕರೆಸಿಕೊಂಡು ಮದ್ಯದಲ್ಲಿ ಮತ್ತುಬರುವ ಔಷಧ ನೀಡಿ ಅತ್ಯಾಚಾರವೆಸಗಿದ್ದಾನೆ.ಕೃಯದ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಬೊಮ್ಮನಹಳ್ಳಿ ಠಾಣೆಯಲ್ಲಿ ಸಂತ್ರಸ್ತೆ ದೂರು ತೆಗೆದುಕೊಳ್ಳಲು ಮುಂದಾಗಿಲ್ಲ. ಇದರಿಂದ ನೊಂದ ಸಂತ್ರಸ್ತೆ ಹಾಗೂ ಪೋಷಕರು ಕಮಿಷನರ್ ಗೆ ದೂರು ನೀಡಿದ್ದಾರೆ. ಕಮಿಷನರ್ ಸೂಚನೆ ಹಿನೆಲೆಯಲ್ಲಿ ಆರೋಪಿ ಅರುಣ್, ವಿಕ್ಕಿ ಎಂಬುವವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ.