*ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಕಾನ್ಸ್ ಟೆಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.Home add -Advt ಮಾಡಬೂಳ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ದೊಡ್ಡೇಶ್ (40) ಆತ್ಮಹತ್ಯೆ ಮಾಡಿಕೊಂಡವರು. ಕಲಬುರ್ಗಿ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ದೊಡ್ಡೇಶ್ ನೇಣಿಗೆ ಕೊರಳೊಡ್ದಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಗುಲಬುರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಸೂರಜ್ ರೇವಣ್ಣ ಅರೆಸ್ಟ್*