Latest

ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಒಂದುವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ.

ಪರಸಪ್ಪ ಕೊನ್ನೂರು (27) ಮೃತ ಪೊಲೀಸ್ ಪೇದೆ. ಉತ್ತರ ಕರ್ನಾಟಕ ಮೂಲದವರಾಗಿದ್ದ ಪರಸಪ್ಪ ಮೈಸೂರಿನ ದೇವರಾಜ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತ್ನಿ ಬೆಳಿಗ್ಗೆ ವಾಕಿಂಗ್ ಹೋಗಿದ್ದು, ಈ ವೇಳೆ ಪರಸಪ್ಪ ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

ಪರಸಪ್ಪ ಕೊನ್ನೂರು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಜಾರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಕಿಸ್ತಾನದಲ್ಲಿ ಪೆಟ್ರೋಲ್ ದರ 34 ರೂಪಾಯಿ ದಿಢೀರ್ ಏರಿಕೆ

Related Articles

Back to top button