Kannada NewsKarnataka NewsLatest

ಬೆಳಗಾವಿಯಲ್ಲಿ ಪೊಲೀಸ್ ವೈಫಲ್ಯ, ಸೋಮವಾರ ಸದನದಲ್ಲಿ ಧ್ವನಿ ಎತ್ತುವೆ – ಅಭಯ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಕಳೆದ ಒಂದು ವರ್ಷದಿಂದಲೂ ನಡೆಯುತ್ತಿರುವ ಘಟನೆಗಳಿಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಶಾಸಕ ಅಭಯ ಪಾಟೀಲ, ಈ ಕುರಿತು ಸೋಮವಾರ ವಿಧಾನಸಭೆಯಲ್ಲಿ ಮಾತನಾಡುವುದಾಗಿ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾವು ಸಾಕಷ್ಟು ಬಾರಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೇಳುತ್ತ ಬಂದಿದ್ದೇವೆ. ಆದರೆ ಸರಿಯಾದ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ನಿನ್ನೆ ನಡೆದ ಘಟನೆಯ ಜೊತೆಗೆ ಪೊಲೀಸ್ ವೈಫಲ್ಯ ಹಾಗೂ ಘಟನೆಯ ಹಿಂದೆ ಯಾರಿದ್ದಾರೆ ಎನ್ನುವುದನ್ನೂ ತನಿಖೆ ನಡೆಸಲಿ ಎಂದು ಅವರು ಹೇಳಿದರು.

ಪೊಲೀಸರು ಬಿಗಿ ಮಾಡಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಕಳೆದ ಸುಮಾರು ಒಂದು ವರ್ಷದಿಂದಲೂ ಪೊಲೀಸರಿಗೆ ಹೇಳುತ್ತಿದ್ದೇವೆ. ಆದರೆ ಅವರು ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಇದರ ಹಿಂದೆ ಯಾರಾದರೂ ಇರಬಹುದು. ಇದರಿಂದ ಲಾಭ ಮಾಡಿಕೊಳ್ಳುವ ಹುನ್ನಾರವಿರಬಹುದು. ಎಲ್ಲವನ್ನೂ ತನಿಖೆಗೊಳಪಡಿಸಲಿದೆ. ಸೋಮವಾರ ವಿಧಾನಸಭೆಯಲ್ಲಿ ಪೊಲೀಸ್ ವೈಫಲ್ಯದ ಬಗ್ಗೆ ಮಾತನಾಡತ್ತೇನೆ ಎಂದು ಅಭಯ ಪಾಟೀಲ ಹೇಳಿದರು.

ಛತ್ರಪತಿ ಶಿವಾಜಿ ಮತ್ತು ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಪುರುಷರು, ರಾಷ್ಟ್ರಪುರುಷರು. ಅನೇಕ ಸ್ವಾತಂತ್ರ್ಯ ಹೋರಾಟಗಾರರಿಗೆ ಆದರ್ಶರಾದವರು. ಅವರಿಬ್ಬರನ್ನೂ ನಾವು ಆರಾಧಿಸುತ್ತೇವೆ. ಇಬ್ಬರಿಗೂ ಆಗಿರುವ ಅವಮಾನವನ್ನು ಖಂಡಿಸುತ್ತೇನೆ. ಇಂತಹ ಘಟನೆಗಳು ನಡೆಯಬಾರದು ಎಂದು ಅವರು ಹೇಳಿದರು.

 

ಯಾರೋ ಕಿಡಿಗೇಡಿಗಳ ಕೃತ್ಯಕ್ಕೆ ಸರ್ಕಾರ, ಪೊಲೀಸ್ ನಿರ್ಲಕ್ಷ್ಯ ಎನ್ನಲಾಗದು; ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button