ಪ್ರಗತಿವಾಹಿನಿ ಸುದ್ದಿ: ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾನಿರ್ದೇಶಕರು ಮತ್ತು ಆರಕ್ಷಕ ಮಾಹಾ ನಿರೀಕ್ಷಕರು ಹುದ್ದೆಯವರೆಗೆ ವಿಶೇಷ ಗುಂಪು ವಿಮಾ ಮೊತ್ತವನ್ನು 50 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದಿಂದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಹೆಚ್ಚಿಸಿ ಆದೇಶಿಸಲಾಗಿದೆ.
ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಪೊಲೀಸ್ ಇಲಾಖೆಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ