
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ವೇಳೆ ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾನೆ.
ಕೆಜಿ ಹಳ್ಳಿ ಪೊಲೀಸ್ ಠಾಣೆ ಬಳಿ ಪರಿಸ್ಥಿತಿ ಕೈಮೀರಿದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿದೆ. ಕೆಲವರಿಗೆ ಗಾಯಗಳಾಗಿದ್ದು, ಓರ್ವ ವ್ಯಕ್ತಿ ಮೃತನಾಗಿದ್ದಾನೆ.
ಪೊಲೀಸ್ ಕಮಿಷನರ್ ಕಮಲಪಂತ್ ಫೈರಿಂಗ್ ನಲ್ಲಿ ವ್ಯಕ್ತಿ ಸಾವಿಗೀಡಾಗಿದ್ದನ್ನು ಖಚಿತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ, ಸ್ಥಳದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಪೈಗಂಬರರ ಕುರಿತು ಬರಹ ಆರೋಪ: ಬೆಂಗಳೂರಿನಲ್ಲಿ ಭಾರಿ ದಾಂಧಲೆ
ಹೊತ್ತಿ ಉರಿಯುತ್ತಿದೆ ಬೆಂಗಳೂರು: ಪೊಲೀಸರ ನಿಯಂತ್ರಣಕ್ಕೆ ಸಿಗುತ್ತಿಲ್ಲ ಪರಿಸ್ಥಿತಿ