*ರೈತರ ಹೆದ್ದಾರಿ ತಡೆ ಹೋರಾಟಕ್ಕೆ ಖಾಕಿ ಪಡೆ ಸಜ್ಜು: ಹಿರೇಬಾಗೇವಾಡಿ ಟೋಲ್ ಬಳಿ ಬಿಗಿ ಭದ್ರತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ರೈತರ ಸಭೆ ವಿಫಲಗೊಂಡ ಹಿನ್ನೆಲೆಯಲ್ಲಿ ಇಂದು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ.
ರೈತರ ಹೋರಾಟದ ಹಿನ್ನೆಲೆಯಲ್ಲಿ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಟೋಲ್ ಗೇಟ್ ಬಳಿ 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇಬ್ಬರು ಪಿಎಸ್ಐ, ಒಬ್ಬರು ಎಎಸ್ಐ ಸೇರಿದಂತೆ 88 ಪೊಲೀಸ್ ಸಿಬ್ಬಂದಿ, ಎರಡು ಡಿಆರ್ ತುಕಡಿಗಳು ಹಾಗೂ ಒಂದು ಕೆಎಸ್ಆರ್ಪಿ ತುಕಡಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.
ರೈತರ ಪ್ರತಿಭಟನೆಯಿಂದ ಹೆದ್ದಾರಿ ಸಂಚಾರಕ್ಕೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



