ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಗನ್
ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಕುಖ್ಯಾತ ದರೋಡೆಕೋರನ ಕಾಲಿನ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ
ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ಚೈನು, ಉಂಗುರು, ಫೋನ್ ಹಾಗೂ ಹಣವನ್ನು ದರೋಡೆ ಪ್ರಕರಣ ನಡೆದಿತ್ತು. ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪನಗರ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಆರೋಪಿ ಅರುಣ ಎಂಬಾತನನ್ನು ಬಂಧಿಸಿದ್ದಾರೆ.
ಬಂಧನದ ವೇಳೆ ಆರೋಪಿ ಅರುಣ್ ಪೊಲೀಸರ ಗಮನವನ್ನು ಬೇರೆಡೆ ಸೆಳೆದು ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೇ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗುತ್ತಾನೆ. ಈ ವೇಳೆ ಪರಾರಿಯಾಗುತ್ತಿದ್ದ ಆರೋಪಿ ಅರುಣ್ ಕಾಲಿಗೆ ಇನ್ಸ್ಪೆಕ್ಟರ್ ಎಮ್.ಎಸ್.ಹೂಗಾರ ಗುಂಡು ಹಾರಿಸಿದ್ದಾರೆ. ಪರಿಣಾಮ ಆರೋಪಿ ಕಾಲಿಗೆ ಗಾಯವಾಗಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಲಾಗಿದೆ ಎಂದು ತಿಳಿದು ಬಂದಿದೆ.