ಪ್ರಗತಿವಾಹಿನಿ ಸುದ್ದಿ; ಗದಗ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ.
ಕೊಟ್ರೆಪ್ಪ ಬಂಡಗಾರ (59) ಮೃತ ಪೊಲೀಸ್ ಹೆಡ್ ಕಾನ್ಸ್ ಟೇಬಲ್. ಮುಂಡರಗಿ ಠಾಣೆಯ ಹೆಡ್ ಕಾನ್ಸ್ ಟೇಬಲ್. ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.
ಜಂತ್ಲಿ ಶಿರೂರ್ ನಿವಾಸಿಯಾಗಿರುವ ಕೊಟ್ರೆಪ್ಪ ಕರ್ತವ್ಯಕ್ಕಾಗಿ ಡಂಬಳಕ್ಕೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಅಪರಿಚಿತ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
*HDK ನೇತೃತ್ವದ JDS ಸಭೆ ದಿಢೀರ್ ರದ್ದು; ಹಾಸನ ಟಿಕೆಟ್ ಗೊಂದಲದಲ್ಲಿ ಬಿಗ್ ಟ್ವಿಸ್ಟ್*
https://pragati.taskdun.com/h-d-kumaraswamyjds-meetingcancelled/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ