Latest

*ಇನ್ಸ್ ಪೆಕ್ಟರ್ ವಿರುದ್ಧವೇ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಅಚ್ಚರಿ ವಿಚಾರವೆಂದರೆ ಹಿತೇಂದ್ರ ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು.

ಕೆಲ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಸ್ ನೀಡದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಪ್ತಿ ಮಾಡಿದ್ದ ಮಾಲನ್ನು ವಾಪಸ್ ನೀಡುವಂತೆ ಹಲವು ಬಾರಿ ಹಿತೇಂದ್ರ ಅವರಿಗೆ ಜ್ಞಾಪನಾ ಪತ್ರ ಹೊರಡಿಸಲಾಗಿತ್ತು. ಆದರೂ ಅವರಿಂದ ಯಾವುದೇ ಉತ್ತರ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಎಫ್ಐಆರ್ ದಾಖಲಿಸಲಾಗಿದೆ.

Related Articles

Back to top button