GIT add 2024-1
Kore@40
Beereshwara 33

*ಪೊಲೀಸ್ ಎನ್ ಕೌಂಟರ್ ಗೆ 18 ನಕ್ಸಲರು ಬಲಿ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಲ್ಲಿನ ಪೊಲೀಸರು ನಕ್ಸಲರನ್ನು ಹತ್ಯೆ ಮಾಡಿದ್ದರು.‌ ಅದರ ಬೆನ್ನಲೆ ಮತ್ತೆ ಪೊಲೀಸರು ಕಾರ್ಯಾಚರಣೆ ಮಾಡಿ ಇಂದು 18 ಜನ ನಕ್ಸಲರನ್ನು ಹತ್ಯೆ ಮಾಡಿದ್ದಾರೆ.‌

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಪೊಲೀಸರೊಂದಿಗಿನ ಗುಂಡಿನ ದಾಳಿಯಲ್ಲಿ ನಕ್ಸಲ್ ನಾಯಕ ಶಂಕ‌ರ್ ರಾವ್ ಹಾಗೂ 18 ನಕ್ಸಲರನ್ನು ಹತ್ಯೆ ಮಾಡಲಾಗಿದೆ.‌ 4 ಎಕೆ -47 ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 

Emergency Service

ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಇದುವರೆಗೆ 18 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಾಯಗೊಂಡ ಸೈನಿಕರನ್ನು ರಕ್ಷಿಸಲು ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದೆ ಜೊತೆಗೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಲ್ಲಿನ ಎಸ್‌ಪಿ ಕಲ್ಯಾಣ್ ಎಲ್ಲಿಸೆಲಾ ಹೇಳಿದ್ದಾರೆ.‌

Laxmi Tai add
Bottom Add3
Bottom Ad 2