*ಹನಿಟ್ರ್ಯಾಪ್ ಮಾಡಿ ವಂಚಿಸುತ್ತಿದ್ದ ಅಪ್ರಾಪ್ತ ಬಾಲಕಿ ಸೇರಿ 8 ಜನರನ್ನು ಲಾಕ್ ಮಾಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಆನ್ ಲೌನ್ ಮೂಲಕ ಹುಡುಗಿಯರಿಂದ ಸೆಕ್ಸ್ ಮಸಾಜ್ ಮಾಡಿಸುವ ಆಸೆ ತೋರಿಸಿ, ಹುಡುಗಿಯರ ಫೋಟೊ ಕಳುಹಿಸಿ ಹಣ ಲೂಟಿ ಮಾಡುತ್ತಿದ್ದ ಜಾಲವನ್ನು ಕೊಡಗು ಜಿಲ್ಲೆಯ ಕುಶಾಲನಗರ ನಗರ ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವ್ಯಕ್ತಿಗಳನ್ನು ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಇದಾಗಿದ್ದು, ಕೊಡಗು ಪೊಲೀಸರು ಹಾಸನ ಜಿಲ್ಲೆಯ ಸಕಲೇಶಪುರದ ಎಂಟು ಆರೋಪಿಗಳನ್ನು ಬೆಂಗಳೂರಿನಲ್ಲಿ ಲಾಕ್ ಮಾಡಿದ್ದಾರೆ.
ಪ್ರವಾಸಿಗರು ಹೆಚ್ಚು ಬರುವ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಹನಿಟ್ರ್ಯಾಪ್ ಪ್ರಕರಣ ನಡೆದಿದ್ದು ಹಾಸನ ಮೂಲದ 3 ಮಹಿಳೆಯರು ಮತ್ತು 5 ಯುವಕರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸಕಲೇಶಪುರದ ಮಂಜುನಾಥ, ಸಂದೀಪ್ ಕುಮಾರ್ ಸಿಎಸ್, ಸಿ.ಬಿ. ರಾಕೇಶ್, ಕೆ. ಜಯಲಕ್ಷ್ಮಿ, ಸಹನಾ, ಪಲ್ಲವಿ, ಅಭಿಷೇಕ್ ಮತ್ತು ಅಪ್ರಾಪ್ತ ಬಾಲಕಿ ಬಂಧಿತರು.
ಈ ಗ್ಯಾಂಗ್ ಕುಶಾಲನಗರದ ಹುಡುಗಿ ಬೇಕಾ ಎಂದು ಆಮಿಷ ತೋರಿಸಿ ವಂಚನೆ ಮಾಡುತ್ತಿತ್ತು. ಬಂಧಿತರಿಂದ ಎರಡು ಕಾರು 17 ಮೊಬೈಲ್, ಒಂದು ಟ್ಯಾಬ್, ಒಂದು ಲ್ಯಾಪ್ಟಾಪ್ ಹಾಗೂ ರೂ. 24,800 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೈಚನಹಳ್ಳಿ ನಿವಾಸಿ ಮಂಜು ಎಂಬುವರು ಜೂನ್ 29 ರಂದು Locanto App 0 Kushalnagar Top Model Sexy Aunties Service Available Kushalnagar – 23 – 35 ಸೈಟ್ನಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದು, ಒಬ್ಬ ವ್ಯಕ್ತಿ ಮಾತನಾಡಿ ನಾನು ಕುಶಾಲನಗರದ ಕಾಳೇಘಾಟ್ ಲಾಡ್ಜ್ ಮೇನೇಜರ್ ಎಂಬುದಾಗಿ ಪರಿಚಯಿಸಿಕೊಂಡು ಲಾಡ್ಜಲ್ಲಿ ಹೆಂಗಸರಿಂದ ಸೆಕ್ಸ್/ಮಸಾಜ್ ಮಾಡಿಸಲಾಗುವುದು. ಆನ್ಸೆನ್ ಮೂಲಕ ಮುಂಗಡವಾಗಿ ಹಣ ಕಳುಹಿಸಿದರೆ ಈಗಲೇ ಹುಡುಗಿಯರ ಏರ್ಪಾಡು ಮಾಡಲಾಗುವುದು ಎಂದು ಆರೋಪಿಗಳು ಫೋನ್ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ.
ಬಳಿಕ ದೂರುದಾರರ Whatsapp ಗೆ ಕೆಲವು ಹೆಂಗಸರ ಭಾವಚಿತ್ರಗಳನ್ನು ಕಳುಹಿಸಿ ಒಂದು ಗಂಟೆಗೆ ರೂ. 1500 ಮತ್ತು ಒಂದು ರಾತ್ರಿಗೆ ರೂ. 4000 ಹಣ ನೀಡಬೇಕಾಗುವುದು ಎಂದು ಹೇಳಿದ್ದಾರೆ.
ದೂರುದಾರರು ಗೂಗಲ್ ಪೇ ಮುಖಾಂತರ ರೂ. 1500 ಹಣವನ್ನು ಕಳುಹಿಸಿದ್ದು, ಅದೇ ವ್ಯಕ್ತಿ ಕರೆ ಮಾಡಿ ಕಾಳೇಘಾಟ್ ಲಾಡ್ಜ್ ಬಳಿ ಬಂದು ಲೋಕೇಷನ್ ಕಳುಹಿಸುವಂತೆ ಮತ್ತು ಯಾವ ಬಣ್ಣದ ಬಟ್ಟೆ ಹಾಕಿದ್ದೀರಾ ಎಂದು ತಿಳಿಸುವಂತೆ ಹೇಳಿದ್ದಾನೆ. ಆ ವ್ಯಕ್ತಿಯು ಹೇಳಿರುವಂತೆ ಕಾಳೇಘಾಟ್ ಲಾಡ್ಜ್ ಬಳಿ ಹೋಗಿ ಕರೆ ಮಾಡಿದಾಗ ಪುನಃ ಆನ್ನೈನ್ನಲ್ಲಿ ಹಣ ಹಾಕಬೇಕು ಎಂದು ಹೇಳಿದ್ದಾರೆ.
ಇದರಿಂದ ಅನುಮಾನಗೊಂಡ ದೂರುದಾರ ಕಾಳೇಘಾಟ್ ಲಾಡ್ಜ್‌ಗೆ ತೆರಳಿ ರಿಸೆಪ್ಯನ್ನಲ್ಲಿ ಈ ಮೇಲಿನ ವಿಚಾರ ಹೇಳಿದಾಗ ಇಂತಹ ವ್ಯವಹಾರವೇ ಇಲ್ಲ. ಇದೇ ವಿಚಾರ ಹೇಳಿಕೊಂಡು 3 ರಿಂದ 4 ಜನ ಬಂದಿದ್ದರು. ನಿಮಗೆ ಯಾರೋ ಮೋಸ ಮಾಡಿದ್ದಾರೆ. ಪೊಲೀಸ್ ಠಾಣೆಗೆ ದೂರು ಕೊಡಿ ಎಂದು ಕಾಳೇಘಾಟ್ ಲಾಡ್ಜ್ ಸಿಬ್ಬಂದಿ ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡ ಪೋಲಿಸರು ತನಿಖೆ ಮಾಡಿ ಹಾಸನ ಜಿಲ್ಲೆಯ ಸಕಲೇಶಪುರದ ಎಂಟು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ