Belagavi NewsBelgaum NewsCrimeKannada NewsKarnataka NewsLatest

*ಕಾರಿಗೆ ಬೆಂಕಿ: ಬೆಂದು ಹೋದ ಪೋಲಿಸ್ ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ, ಧಾರವಾಡ: ಅಣ್ಣಿಗೇರಿ ಬಳಿ ಸಂಭವಿಸಿದ ಭೀಕರ ಅವಘಡದಲ್ಲಿ ಪೊಲೀಸ್ ಅಧಿಕಾರಿಯೋರ್ವರು ಬೆಂದುಹೋಗಿದ್ದಾರೆ.

ಮದುವೆ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಸಂದರ್ಭದಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ ಸುಟ್ಟು ಕರಕಲಾಗಿದ್ದಾರೆ.

ಕಂಬನಿ: ಸಾಲಿಮಠ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Home add -Advt

ಮುರಗೋಡ್ ಗ್ರಾಮದ ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು, ಮನಸ್ಸಿಗೆ ನೋವಾಯಿತು.

ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದ್ದು ಪೋಲಿಸ್ ಇಲಾಖೆಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟ.

ಪಂಚಾಕ್ಷರಿ ಅವರು ಈ ಹಿಂದೆ ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದರು.

ಭಗವಂತ ಮೃತರ ಆತ್ಮಕ್ಕೆ ಶಾಂತಿ‌ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

  • ಲಕ್ಷ್ಮೀ ಹೆಬ್ಬಾಳಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು

Related Articles

Back to top button