Kannada NewsKarnataka News

*ವಿಮಾನ ನಿಲ್ದಾಣದಲ್ಲಿ ಭೀಕರ ಮರ್ಡರ್*

ಪ್ರಗತಿವಾಹಿನಿ ಸುದ್ದಿ : ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪದಲ್ಲಿ ಕೊಲೆ ನಡೆದಿದೆ.

ರಾಮಕೃಷ್ಣ (45) ಮೃತ ದುರ್ದೈವಿ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ರಮೇಶ್ ಕೊಲೆ ಆರೋಪಿ. ಬೆಂಗಳೂರು ಏರ್‌ಪೋರ್ಟ್‌ ಟರ್ಮಿನಲ್‌ ಒಂದರಲ್ಲಿ ರಾಮಕೃಷ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ರಮೇಶ್ ರಾಮಕೃಷ್ಣನಿಗೆ ಕರೆ ಮಾಡಿ ನನ್ನ ಸಂಸಾರ ಹಾಳು ಮಾಡಿದ್ದೀಯ ಎಂದು ಜಗಳ ಮಾಡಿದ್ದ. ಅದರ ಬೆನ್ನಲ್ಲೇ ಬಿಎಂಟಿಸಿ ಬಸ್‌ನಲ್ಲಿ ಏರ್‌ಪೋರ್ಟ್‌ಗೆ ಆಗಮಿಸಿದ ರಮೇಶ್, ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button