Kannada NewsKarnataka NewsLatest
*ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ; ತುಮಕೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿ ಕೊರತೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯದಲ್ಲಿ 15,000 ಪೊಲೀಸ್ ಹುದ್ದೆ ಖಾಲಿಯಿದೆ ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಹುದ್ದೆ ನೇಮಕಾತಿ ಪ್ರಕ್ರಿಯೆ ಈಗಾಗಲೆ ಆರಂಭವಾಗಿದ್ದು, ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದರು.
ಇನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿ 170 ಕಾಮಗಾರಿ ನದೆಯುತ್ತಿದೆ ನವೆಂಬರ್ ಒಳಗೆ ಎಲ್ಲಾ ಕಾಮಗಾರಿಗಳು ಮುಗಿಯಲಿವೆ ಎಂದು ಹೇಳಿದರು.




