Belagavi NewsBelgaum NewsKannada NewsKarnataka NewsPolitics

*ಚಳಿಗಾಲದ ಅಧಿವೇಶನಕ್ಕೆ ಪೊಲೀಸ್ ಸಿದ್ಧತೆ*: *ಪ್ರತಿಭಟನಾ ಸ್ಥಳ ಪರಿಶೀಲಿಸಿದ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿ. 2 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸ್ ಇಲಾಖೆ ಸಿದ್ಧತೆಗಳನ್ನು ಚುರುಕುಗೊಳಿಸಿದೆ.

ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಬೆಳಗಾವಿಗೆ ಆಗಮಿಸಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ, ಧರಣಿ ಹಾಗೂ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಜಿಲ್ಲಾಡಳಿತದಿಂದ ಗುರುತಿಸಲಾಗಿರುವ ಸ್ಥಳದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಅವರು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಹಲಗಾ-ಮಚ್ಚೆ ರಸ್ತೆಯ ಅಲಾರವಾಡ ಕ್ರಾಸ್ ಸಮೀಪದ ನಿಗದಿತ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲು ಪೆಂಡಾಲ್‌ಗಳನ್ನು ಹಾಕಿಕೊಳ್ಳಲು ಲಭ್ಯವಿರುವ ಸ್ಥಳಾವಕಾಶ, ಪ್ರತಿಭಟನಾಕಾರರಿಗೆ ಕಲ್ಪಿಸಬೇಕಾದ ಮೂಲಸೌಕರ್ಯ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಲಾಯಿತು.

ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು, ಪ್ರತಿಭಟನಾಕಾರರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಿದ್ಧತೆ ಕೈಗೊಂಡಿದೆ.

ಅಧಿವೇಶನ ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಪೂರ್ವಸಿದ್ಧತಾ ಕಾರ್ಯಗಳು ಮತ್ತಷ್ಟು ವೇಗ ಪಡೆದುಕೊಂಡಿವೆ.

Related Articles

Back to top button