CrimeKannada NewsKarnataka News

*ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಓರ್ವ ಮಹಿಳೆ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ.‌ ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಲಾಗಿದೆ. ಸಿಂಧನೂರು ಹೊರವಲಯದ ನ್ಯಾಷನಲ್ ಲೇಔಟ್‌ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಮೂವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಕಿಂಗ್ ಪಿನ್ ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ.

ದಂಧೆಗಾಗಿಯೇ ಮನೆಯನ್ನ ಬಾಡಿಗೆ ಪಡೆದಿದ್ದು ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಹೆಣ್ಣುಮಕ್ಕಳನ್ನ ದಂಧೆಗೆ ಅಭಿಷೇಕ್ ಬಳಸುತ್ತಿದ್ದ ಎನ್ನಲಾಗಿದೆ. ಸದ್ಯ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕೇಸ್ ಸಂಬಂಧ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button