
ಪೊಲೀಸರ ದಾಳಿ
ಪ್ರಗತಿವಾಹಿನಿ ಸುದ್ದಿ: ಗೋಮಾಂಸ ಮಾರಾಟಕ್ಕಾಗಿ 60ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿರುವ ಘೋರ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ.
ಈ ಬಗ್ಗೆ ಖಚಿತ ಮಾಹಿತಿ ತಿಳಿದಿ ದಾಳಿ ನಡೆಸಿದ ಪೊಲೀಸರು 10,000 ಕೆಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. 5 ಗೋವುಗಳನ್ನು ರಕ್ಷಿಸಿದ್ದಾರೆ.
ಪೊಲೀಸರು ದಾಳಿ ನಡೆಸಿದ್ದ ವೇಳೆ ಅಕ್ರಮವಾಗಿ ಗೋಮಾಂಸ ಮಾರಾಟಕ್ಕೆಂದು 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿ ನೇತುಹಾಕಲಾಗಿದ್ದು ಕಂಡುಬಂದಿದೆ. ಗೋವುಗಳ ರಕ್ತವನ್ನು ಕೆರೆಗೆ ಹರಿಸಲಾಗುತ್ತಿತ್ತು. ಪೊಲೀಸರು ದಾಳಿ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಮಹಮ್ಮದ್ ಅಬ್ದುಲ್ ಹಕ್ ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಚನ್ನರಾಯಪಟ್ಟಣ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ