Kannada NewsKarnataka NewsLatest

*ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ಪೊಲೀಸರ ದಾಳಿ*

ಮೂವರ ಬಂಧನ; 7 ಯುವತಿಯರ ರಕ್ಷಣೆ


ಪ್ರಗತಿವಾಹಿನಿ ಸುದ್ದಿ: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಂಗಳೂರು ಯಲಹಂಕ ನ್ಯೂ ಟೌನ್ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ.

ದಾಳಿ ವೇಳೆ 7 ಯುವತಿಯರನ್ನು ರಕ್ಷಿಸಲಾಗಿದೆ. ರೋರಾ ಥಾಯ್ ಸ್ಪಾ (ಮಸಾಜ್ ಪಾರ್ಲರ್) ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಈಶಾನ್ಯ ವಿಭಾಗದ ಡಿಸಿಪಿಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲು ಸೂಚಿಸಿದ್ದರು.

ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಮೂರು ಆರೋಪಿಗಳನ್ನು ಬಂಧಿಸಿದ್ದಾರೆ. 7 ಯುವತಿಯರನ್ನು ರಕ್ಷಿಸಿದ್ದಾರೆ. ಈ ಸ್ಪಾದಲ್ಲಿ ಥಾಯ್ಲೆಂಡ್ ಸೇರಿದಂತೆ ವಿದೇಶಗಳಿಂದ ಟೂರಿಸ್ಟ್, ಬಿಸಿನೆಸ್ ವೀಸಾ ಮೇಲೆ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಹೊರಗಿನಿಂದ ಸ್ಪಾ ರೀತಿ ಬಿಂಬಿತವಾಗಿದ್ದ ಸ್ಥಳದಲ್ಲಿ ಒಳಗಡೆ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button