Karnataka News

ಪಂಚಮಸಾಲಿ ಶ್ರೀಗಳಿಗೆ ಪೊಲೀಸ್ ಭದ್ರತೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿದ್ದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಸ್ವಾಮಿಗಳಿಗೆ ಜೀವಬೆದರಿಕೆ ಬಂದಿದೆ ಎನ್ನುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬೊಮ್ಮಾಯಿ ಈ ಸೂಚನೆ ನೀಡಿದ್ದಾರೆ. ಸರಕಾರದ ಮೀಸಲಾತಿ ನೀತಿಯನ್ನು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಸ್ವಾಮಿಗಳಿಗೆ ಕೆಲವರಿಂದ ಬೆದರಿಕೆ ಕರೆಗಳು ಬರುತ್ತಿವೆ. ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದ ಕೆಲವು ಕಾಂಗ್ರೆಸ್ ನಾಯಕರು ಕಿರುಕುಳ ನೀಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಮತ್ತು ಸಚಿವ ಸಿ.ಸಿ.ಪಾಟೀಲ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ವಾಮಿಗಳಿಗೆ ಭದ್ರತೆ ಒದಗಿಸುವಂತೆ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮೀಸಲಾತಿ ಹೋರಾಟ ವಿಷಯವನ್ನು ಈ ಬಾರಿಯ ಚುನಾವಣೆ ವಿಷಯವಾಗಿ ಬಳಸಿಕೊಳ್ಳುವ ಎಲ್ಲ ಸೂಚನೆಗಳು ಕಂಡುಬರುತ್ತಿವೆ.

https://pragati.taskdun.com/panchamasali-reservationbasavajaya-mrutyunjaya-swamijithreataravinda-belladpanchamasali-reservationbasavajaya-mrutyunjaya-swamijithreataravinda-bellad/
https://pragati.taskdun.com/bjpayanuru-manjunathshivamoggaresign/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button