Kannada NewsKarnataka NewsNational

*ಎರಡೂವರೆ ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡ ಪೊಲೀಸರು*

ಪ್ರಗತಿವಾಹಿನಿ ಸುದ್ದಿ : ರಾಜಧಾನಿ ಬೆಂಗಳೂರಿನಲ್ಲಿ ನ್ಯೂ ಇಯರ್ 2025ಕ್ಕೆ ಭರ್ಜರಿ ವೆಲ್ ಕಮ್ ಮಾಡಲಾಗಿದ್ದು. ನಗರದ ಹಲವು ಕಡೆಗಳಲ್ಲಿ ಪಾರ್ಟಿ, ಮೋಜು ಮಸ್ತಿ ವೇಳೆ ಪೂರೈಕೆ ಮಾಡಲು ತರೆಸಿದ್ದ ಸುಮಾರು ಎರಡುವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಅನ್ನು ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ

ಥೈಲ್ಯಾಂಡ್‌ನಿಂದ ತರಿಸಿದ್ದ ಹೈಡೋ ಗಂಜಾವನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಮೂಲದ ರಕ್ಷಿತ್ ರಮೇಶ್ ಎಂಬಾತನನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಆತನ ಸಂಪಿಗೆಹಳ್ಳಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ ಬೆಂಗಳೂರಿನ ಪಾರ್ಟಿಗಳಿಗೆ ಪೂರೈಕೆ ಮಾಡಲು ತರಿಸಿದ್ದ ಬರೋಬ್ಬರಿ ಹದಿನಾರು ಕೆಜಿ ಗಾಂಜಾ ಸೊಪ್ಪು ಮತ್ತು ಥೈಲ್ಯಾಂಡ್‌ನಿಂದ ತರಿಸಿದ್ದ ಸುಮಾರು ಮೂರು ಕೆಜಿ ಹೈಡೋ ಗಾಂಜಾ ದೊರೆತಿದೆ. ಎಂಡಿಎಂಎ, ಎಲ್‌ಎಸ್‌ಡಿ ಮತ್ತು ಚರಸ್ ಎಲ್ಲ ಸೇರಿ ಸುಮಾರು 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button