Kannada NewsKarnataka NewsLatest

*ಕೊಲೆ ಆರೋಪಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಪರಾರಿ*

ಪ್ರಗತಿವಾಹಿನಿ ಸುದ್ದಿ: ಕೊಲೆ ಆರೋಪಿಯೊಬ್ಬ ಪೊಲೀಸ್ ಠಾಣೆಯಿಂದಲೇ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಕೊಲೆ ಆರೋಪಿ ಪ್ರಜ್ವಲ್ ಎಂಬಾತ ಎಸ್ಕೇಪ್ ಆಗಿದ್ದಾನೆ. ಕೊಲೆ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಆರೋಪಿಯನ್ನು ಕರೆತರಲಾಗಿತ್ತು. ಆದರೆ ಪೊಲೀಸರ ಕಣ್ತಪ್ಪಿಸಿ ಈಗ ಠಾಣೆಯಿಂದಲೇ ಪರಾರಿಯಾಗಿದ್ದಾನೆ.

Home add -Advt

ಈ ಬಗ್ಗೆ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಕಮಿಷನರ್ ಶಶಿಕುಮಾರ್, ಪೊಲೀಸ್ ಠಾಣೆಯಿಂದ ಕೊಲೆ ಆರೋಪಿ ಎಸ್ಕೇಪ್ ಆಗಿದ್ದು, ಆದಷ್ಟು ಬೇಗ ಆತನನ್ನು ವಶಕ್ಕೆ ಪಡೆಯುತ್ತೇವೆ ಎಂದಿದ್ದಾರೆ.

ಪೊಲೀಸ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಈ ಬಗ್ಗೆ ಇನ್ಸ್ ಪೆಕ್ಟರ್ ಕಡೆಯಿಂದ ವರದಿ ಕೇಳಿದ್ದೇವೆ. ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Related Articles

Back to top button