*ಕೊಲೆ ಆರೋಪಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಪರಾರಿ*

ಪ್ರಗತಿವಾಹಿನಿ ಸುದ್ದಿ: ಕೊಲೆ ಆರೋಪಿಯೊಬ್ಬ ಪೊಲೀಸ್ ಠಾಣೆಯಿಂದಲೇ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಕೊಲೆ ಆರೋಪಿ ಪ್ರಜ್ವಲ್ ಎಂಬಾತ ಎಸ್ಕೇಪ್ ಆಗಿದ್ದಾನೆ. ಕೊಲೆ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಆರೋಪಿಯನ್ನು ಕರೆತರಲಾಗಿತ್ತು. ಆದರೆ ಪೊಲೀಸರ ಕಣ್ತಪ್ಪಿಸಿ ಈಗ ಠಾಣೆಯಿಂದಲೇ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಕಮಿಷನರ್ ಶಶಿಕುಮಾರ್, ಪೊಲೀಸ್ ಠಾಣೆಯಿಂದ ಕೊಲೆ ಆರೋಪಿ ಎಸ್ಕೇಪ್ ಆಗಿದ್ದು, ಆದಷ್ಟು ಬೇಗ ಆತನನ್ನು ವಶಕ್ಕೆ ಪಡೆಯುತ್ತೇವೆ ಎಂದಿದ್ದಾರೆ. ಪೊಲೀಸ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. … Continue reading *ಕೊಲೆ ಆರೋಪಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಪರಾರಿ*