Kannada NewsKarnataka NewsLatest

ಡಿಸಿ ಬಂಗ್ಲೆಯಲ್ಲಿ ಗುಂಡುಹಾರಿಸಿಕೊಂಡ ಪೊಲೀಸ್

https://youtu.be/Hr6vFH2jUf4

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಜಾಧವನಗರ ಬಳಿ ಇರುವ ಜಿಲ್ಲಾಧಿಕಾರಿಗಳ ಬಂಗ್ಲೆ ಕಾವಲಿಗಿದ್ದ ಪೊಲೀಸ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಂದು ಬೆಳಗಿನಜಾವ ಈ ಘಟನೆ ನಡೆದಿದೆ. ಪ್ರಕಾಶ ಗುರಯ್ಯನವರ್ (35) ಆತ್ಮಹತ್ಯೆ ಮಾಡಿಕೊಂಡ ಪೇದೆ. ತಲೆಗೆ 2 ಸುತ್ತು ಗುಂಡು ಹಾರಿಸಿಕೊಂಡಿದ್ದಾನೆಂದು ಗೊತ್ತಾಗಿದೆ. ನಿಖರ ಕಾರಣ ಗೊತ್ತಾಗಿಲ್ಲ. ಕಿತ್ತೂರು ಮೂಲದವನಾದ ಪ್ರಕಾಶ್ ಗೆ ಪತ್ನಿ, ಮಕ್ಕಳಿದ್ದಾರೆ.

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button