Latest

17 ವರ್ಷದ ಯುವತಿ ಮೇಲೆ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಮುಂಬೈ: 17 ವರ್ಷದ ಯುವತಿ ಮೇಲೆ ಪೊಲೀಸ್ ಅಧಿಕಾರಿಯೇ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಬೆಳಕಿಗೆ ಬಂದಿದೆ.

ಅಮರಾವತಿಯ ಹೋಟೆಲ್ ಒಂದರಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಪೊಲೀಸ್ ಸಿಬ್ಬಂದಿ ಹಾಗೂ ಯುವತಿ ಒಂದೇ ಗ್ರಾಮದವರಾಗಿದ್ದು, ಪರಿಚಿತರಾಗಿದ್ದರು. ನಾಗ್ಪುರದಲ್ಲಿ ಪಿಜಿಯಲ್ಲಿ ವಾಸವಾಗಿದ್ದ ಯುವತಿಯನ್ನು ಸುತ್ತಾಡಲೆಂದು ಆರೋಪಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕಾರಲ್ಲಿ ಕರೆದೊಯ್ದಿದ್ದಾನೆ. ಈ ವೇಳೆ ಯುವತಿಗೆ ಮದ್ಯ ಕುಡಿಸಿ ನಂತರ ಹೋಟೆಲ್ ರೂಮ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಕೃತ್ಯದ ಬಳಿಕ ಯುವತಿಗೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಆಂಟಿ ನಕ್ಸಲ್ ಕಾರ್ಯಾಚರಣೆಗೆಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಗೊಂಡಿದ್ದ. ಇದೀಗ ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪಿದಲ್ಲಿ ಆರೋಪಿ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ.

Home add -Advt

ಐಪಿಸಿ ಸೆಕ್ಷನ್ 363-ಅಪಹರಣ, 376-ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ)ಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
ಒಳ ಉಡುಪು ತೆಗೆದು ನೀಟ್ ಪರೀಕ್ಷೆ ಬರೆಯುಂತೆ ಹೇಳಿದ ಮೇಲ್ವಿಚಾರಕ

Related Articles

Back to top button