Karnataka News

*ಕುಖ್ಯಾತ ಡಕಾಯಿತನ ಮೇಲೆ ಪೊಲೀಸರಿಂದ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: 13 ಎಟಿಎಂ ಕಳ್ಳತನ ಪ್ರಕರಣ, ಎರಡು ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಡಕಾಯಿತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಡಕಾಯಿತ ಅಮರೇಶ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಪ್ರಕರಣವೊಂದರಲ್ಲಿ ಬಂಧನಕ್ಕೀದಾಗಿದ್ದ ಆರೋಪಿ ಅಮರೇಶ್, ಸ್ಥಳಮಹಜರಿಗೆ ಕರೆದುಕೊಂಡು ಬಂದಿದ್ದ ವೇಳೆ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ.

Home add -Advt

ಈ ವೇಳೆ ಸಿರಗುಪ್ಪ ಸಿಪಿಐ ಹನುಮಂತಪ್ಪ ಗಾಳಿಯಲ್ಲಿ ಗುಂಡು ಹಾರಿಸಿ ನಿಲ್ಲುವಂತೆ ಎಚ್ಚರಿಕೆ ನೀಡಿದ್ದಾರೆ. ಆರೋಪಿ ಇದನ್ನು ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡೇಟು ಹೊಡೆಯಲಾಗಿದೆ.

ಆರೋಪಿ ಅಮರೇಶ್ ಕರ್ನಾಟಕ ಹಾಗೂ ಆಂಧ್ರಪ್ರದೇಶ ಎರಡೂ ರಾಜ್ಯಗಳಲ್ಲಿ ಕಳ್ಳತನ್ ಮಾಡುತ್ತಿದ್ದ. 13 ಎಟಿಎಂ ದರೋಡೆ ಕೇಸ್ ನಲ್ಲಿ ಭಾಗಿಯಾಗಿದ್ದ. ಘಟನೆಯಲ್ಲಿ ಪೇದೆ ವಿರೂಪಾಕ್ಷ ಗೌಡ, ಮಾರುತಿ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Articles

Back to top button