ವಿಕೋಪಕ್ಕೆ ಹೋದ ಮಾಜಿ ದೋಸ್ತಿಗಳ ಜಗಳ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಲವೇ ತಿಂಗಳ ಹಿಂದೆ ಕೈ ಕೈ ಹಿಡಿದುಕೊಂಡು ಫೋಸ್ ಕೊಟ್ಟಿದ್ದ ಸಿದ್ದರಾಮಯ್ಯ -ಕುಮಾರಸ್ವಾಮಿ ಈಗ ಬೀದಿ ಜಗಳಕ್ಕಿಳಿದಿದ್ದಾರೆ. ಒಬ್ಬರನ್ನೊಬ್ಬರು ಹಾವು -ಮುಂಗುಸಿ ರೀತಿಯಲ್ಲಿ ನೋಡತೊಡಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.  ಕುಮಾರಸ್ವಾಮಿ ಟ್ವಿಟ್ ಮಾಡಿದ್ದು, ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಕೆಲವರು ತಾನು ಮುಖ್ಯಮಂತ್ರಿ ಆಗಲೇಬೇಕೆಂಬ ದುರಾಸೆಯಿಂದ ಜನರ ಹಣ ಪೋಲಾದರೂ ಪರವಾಗಿಲ್ಲ ಎಂದು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಪಕ್ಷ ಬಿಟ್ಟು ಹೋದ ಶಾಸಕರಲ್ಲಿ ಬಹುತೇಕರು ನಿಮ್ಮ ಪಕ್ಷದವರೇ ಎಂಬುದನ್ನು ಮರೆಯಬೇಡಿ. ಪಕ್ಕದ ಮನೆಯ ಒಲೆ ಆರಿಸಲು ಬರುವ ಮುನ್ನ ಹೊತ್ತಿ ಉರಿಯುತ್ತಿರುವ ತಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ ಎಂದು ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
 ಬಿಜೆಪಿಗೆ ಜೆಡಿಎಸ್ ಶಾಸಕರು ಹೋಗುವುದನ್ನು ತಡೆಯಲು ಸರ್ಕಾರ ಬೀಳಿಸಲ್ಲ ಎಂದು ಕುಮಾರಸ್ವಾಮಿ ಹೇಳ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ಸಿದ್ದರಾಮಯ್ಯಗೆ ಟ್ವೀಟರ್‌ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Related Articles

Related Articles

Back to top button