KLE1099 Add

ಮಾಧ್ಯಮದವರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗ್ಯಾಕ್ ಆಗ್ತಿತ್ತು? – ರಮೇಶ ಜಾರಕಿಹೊಳಿ ಪ್ರಶ್ನೆ

ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; ಮಹತ್ವದ ಚರ್ಚೆ

Beereshwara 6

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸುಳಿವು ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಿಎಂ ಜೊತೆ ಚರ್ಚೆ ನಡೆಸಿದರು. ಈ ವೇಳೆ ರಮೇಶ್ ಜಾರಕಿಹೊಳಿಗೆ ಮಾಜಿ ಸಿಎಂ ಬಿಎಸ್ ವೈ ರಾಜಕೀಯ ಕಾರ್ಯದರ್ಶಿಯಾಗಿದ್ದ ಸಂತೋಷ್ ಸಾಥ್ ನೀಡಿದ್ದರು.

ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ರಮೇಶ್ ಜಾರಕಿಹೊಳಿ, ನಾನೇನೂ ಮಾತನಾಡಲ್ಲ, ನಾನು ಏನೇ ಮಾತನಾಡಿದರೂ ನೀವು ಉಲ್ಟಾ ಹಾಕ್ತೀರಾ. ಮಾಧ್ಯಮದವರು ಕರೆಕ್ಟ್ ಇದ್ದಿದ್ರೆ ನಮ್ ಬಾಳ್ ಹಿಂಗ್ಯಾಕ್ ಆಗ್ತಿತ್ತು ಎಂದು ಹೇಳಿ ತೆರಳಿದ್ದಾರೆ.

ಇನ್ನು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಮೇಶ್ ಜಾರಕಿಹೊಳಿ ಸಿಎಂ ಭೇಟಿಯಾಗಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ: ರಾಜೇಶ್ ಭಟ್ ವಿರುದ್ಧ FIR

You cannot copy content of this page