Kannada NewsKarnataka News

75 ಲಕ್ಷ ರೂ. ವೆಚ್ಚದ ನೂತನ ಪಿಎಚ್‌ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ

 ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಅರಭಾವಿ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಎಲ್ಲ ಕ್ಷೇತ್ರಗಳಿಗೂ ಹಾಗೂ ಸರ್ವ ಜನಾಂಗದ ಏಳ್ಗೆಗಾಗಿ ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿವೃದ್ಧಿಯ ಧೃವತಾರೆ ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.
ಬುಧವಾರ ತಾಲೂಕಿನ ಯಾದವಾಡ ಗ್ರಾಮದಲ್ಲಿ ಒಟ್ಟು ೭೫ ಲಕ್ಷ ರೂ. ವೆಚ್ಚದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ ಹಾಗೂ ಸುತ್ತಮುತ್ತಲಿನ ನಾಗರೀಕರಿಗೆ ಆರೋಗ್ಯ ಸುರಕ್ಷತೆಗಾಗಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ ಇಷ್ಟರಲ್ಲಿಯೇ ತಲೆಯೆತ್ತಲಿದೆ ಎಂದು ಹೇಳಿದರು.

ಯಾದವಾಡ ಹಾಗೂ ಸುತ್ತಲಿನ ೧೪ ಗ್ರಾಮಗಳಿಗೆ ಸರ್ಕಾರಿ ಆಸ್ಪತ್ರೆ ಅನುಕೂಲವಾಗಲಿದೆ. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲಿದೆ. ಹಲವು ವರ್ಷಗಳಿಂದ ಶಿಥಿಲಗೊಂಡಿದ್ದ ಸರ್ಕಾರಿ ಆಸ್ಪತ್ರೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂಜೀವಿನಿಯಾಗಿ ಜೀವದಾನ ಕಲ್ಪಿಸಿಕೊಟ್ಟಿದ್ದಾರೆ. ಒಟ್ಟು ೭೫ ಲಕ್ಷ ರೂ.ಗಳ ವೆಚ್ಚದಲ್ಲಿ ಹೊಸ ಆಸ್ಪತ್ರೆ ಜನರ ಸೇವೆಗೆ ಸಿಗಲಿದೆ. ಯಾದವಾಡ ಹಾಗೂ ಸುತ್ತಲಿನ ನಾಗರೀಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಸ್ಪತ್ರೆಯ ಹೊಸ ಕಟ್ಟಡಕ್ಕೆ ಎಲ್ಲ ರೀತಿಯ ಅನುದಾನ ನೀಡಲಿದ್ದು, ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಇದಕ್ಕಾಗಿ ೩೦ ಲಕ್ಷ ರೂ.ಗಳನ್ನು ಕೊಟ್ಟಿದೆ. ಉಳಿದ ಹಣವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೀಡುವರು. ಯಾದವಾಡ ಹಾಗೂ ಸುತ್ತಲಿನ ಜನತೆಗೆ ಈ ಹೊಸ ಆಸ್ಪತ್ರೆ ಸಂಜೀವಿನಿಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾಲ್ಮೀಯಾ ಸಿಮೆಂಟ್ ಕಾರ್ಖಾನೆಯ ಜನರಲ್ ಮ್ಯಾನೇಜರ್ ಮುಖೇಶಕುಮಾರ ಸಿನ್ಹಾ, ಮಯಾಂಕ್ ಅಗರವಾಲ್, ಜಿಪಂ ಮಾಜಿ ಸದಸ್ಯರಾದ ಡಾ.ರಾಜೇಂದ್ರ ಸಣ್ಣಕ್ಕಿ, ರಂಗಪ್ಪ ಇಟ್ಟನ್ನವರ, ತಾಪಂ ಮಾಜಿ ಅಧ್ಯಕ್ಷ ಶಂಕರ ಬೆಳಗಲಿ, ಯಾದವಾಡ ಗ್ರಾಪಂ ಅಧ್ಯಕ್ಷೆ ಜಯಶ್ರೀ ದಾಸರ, ಕಾಮನಕಟ್ಟಿ ಗ್ರಾಪಂ ಅಧ್ಯಕ್ಷ ಸದಾಶಿವ ದುರಗನ್ನವರ, ತಹಶೀಲ್ದಾರ ಡಿ.ಜೆ. ಮಹಾತ್, ಮೂಡಲಗಿ ತಾಪಂ ಇಓ ಎಫ್.ಜಿ. ಚಿನ್ನನ್ನವರ, ತಾಲೂಕಾ ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಗೋಕಾಕ ಸಿಎಂಓ ಡಾ.ರವೀಂದ್ರ ಅಂಟೀನ್, ಬಿಇಓ ಅಜೀತ ಮನ್ನಿಕೇರಿ, ಸಿಪಿಐ ವೆಂಕಟೇಶ ಮುರನಾಳ, ಡಾ.ಆರ್.ಎಸ್. ಬೆಣಚಿನಮರಡಿ, ಚಿತ್ರ ನಿರ್ಮಾಪಕ ಬಸು ಭೂತಾಳಿ, ಪರ್ವತಗೌಡ ಪಾಟೀಲ, ಗ್ರಾಪಂ ಮಾಜಿ ಅಧ್ಯಕ್ಷ ಯಲ್ಲಪ್ಪಗೌಡ ನ್ಯಾಮಗೌಡ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಶಿವಪ್ಪಗೌಡ ನ್ಯಾಮಗೌಡ, ಮುಖಂಡರಾದ ಬೀರಪ್ಪ ಮುಗಳಖೋಡ, ಹನಮಂತ ಹುಚರಡ್ಡಿ, ಗೌಡಪ್ಪ ಗುರಡ್ಡಿ, ಮಲ್ಲಪ್ಪ ಚಕ್ಕೆನ್ನವರ, ರಾಜುಗೌಡ ಪಾಟೀಲ, ಬಸು ಹಿಡಕಲ್, ಬಸು ಕೇರಿ, ಲಕ್ಷ್ಮಣ ಪಾಟೀಲ, ಶ್ರೀಶೈಲ ಢವಳೇಶ್ವರ, ಪಿಎಚ್‌ಸಿ ವೈದ್ಯಾಧಿಕಾರಿ ಡಾ.ಕಾದ್ರೋಳಿ, ಗ್ರಾಪಂ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ACB ದಾಳಿ : ಬಿಇಒ ಕಚೇರಿ ಎಸ್ ಡಿಸಿ ಆರೆಸ್ಟ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button