ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧೀ ಭವನ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ ಅವರು ಬುಧವಾರ(ಅ.2) ಚಾಲನೆ ನೀಡಿದರು.
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನದಂದೇ ಭೂಮಿಪೂಜೆ ನೆರವೇರಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ಪೀರನವಾಡಿಯಲ್ಲಿ ಜೈನ್ ಕಾಲೇಜ್ ಎದುರಿಗೆ ಗಾಂಧೀ ಭವನ ನಿರ್ಮಾಣಕ್ಕೆ ಸರ್ಕಾರ ಎರಡು ಎಕರೆ ಜಮೀನು ಮಂಜೂರು ಮಾಡಿದೆ.
ಭವನ ನಿರ್ಮಾಣಕ್ಕೆ ಒಟ್ಟಾರೆ ಮೂರು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು, ಈಗಾಗಲೇ 2.87 ಕೋಟಿ ರೂಪಾಯಿಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಮಾಡಿದೆ.
ಪೀರನವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಕೇಶ್ ತಳವಾರ, ಭೂಷಣ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಪಾಟೀಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ