
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೆಳಗಾವಿ ಗ್ರಾಮೀಣ ಪ್ರದೇಶದ ಅತವಾಡ ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಜಲಜೀವನ ಮಿಷನ್ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಮನೆ ಮನೆಗೆ ನಳ ಸಂಪರ್ಕ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಬುಧವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೃಣಾಲ್ ಹೆಬ್ಬಾಳಕರ್, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆ. ನೀರು, ರಸ್ತೆ ಮೊದಲಾಗಿ ಮೂಲ ಸೌಕರ್ಯಗಳ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರನಿಧಿಗಳು,ಮಾರುತಿ ಪಾಟೀಲ, ಕಲ್ಲಪ್ಪ ಪಾಟೀಲ, ಮಾರುತಿ ಬೆಳಗಾಂವ್ಕರ, ಕಲ್ಲಪ್ಪ ಕಡೋಲ್ಕರ್, ಕೃಷ್ಣ ಪಾಟೀಲ, ಕೇದಾರಿ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ಸರಕಾರದಿಂದ ಸಾಧ್ಯವಾಗದ ಕೆಲಸ ಮಠದಿಂದ ಸಾಧ್ಯವಾಗಿದೆ:ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ