
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7.11 ಕೋಟಿ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ.
ಜಯದೇವ ಡೇರಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದ ವೇಳೆ ಏಕಾಏಕಿ ಬಂದ ಗ್ಯಾಂಗ್ ವೊಂದು 7.11 ಕೋಟಿ ರೂಪಾಯಿ ಹಣವನ್ನು ದರೋಡೆ ಮಾಡಿ ಪರಾರುಯಾಗಿದೆ.
ಗವರ್ನಮೆಂಟ್ ಆಫ್ ಇಂಡಿಯಾ ಎಂದು ಕಾರಿನ ಮೇಲೆ ಬರೆದುಕೊಂಡು ಬಂದು ಪಕ್ಕಾ ಪ್ಲಾನ್ ಮಾಡಿರುವ ಗ್ಯಾಂಗ್ ನಿಂದ ಫ್ಲೈ ವೋವರ್ ಮೇಲೆ ಈ ದರೋಡೆ ನಡೆದಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದೆ.

