
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ಆರಂಭಿಸಿದ್ದವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಎರಡು ದಿನಗಳ ಹಿಂದೆ ಜೆಡಿಎಸ್ ನಿಂದ ಸರ್ಕಾರದ ವಿರುದ್ಧ ಸಾಕಪ್ಪ ಸಾಕು ಪೋಸ್ಟರ್ ಅಭಿಯಾನ ನಡೆಸಲಾಗಿತ್ತು. ಬೆಂಗಳೂರಿನ ಮಹಾರಾಣಿ ಕಾಲೇಜು ಬಸ್ ನಿಲ್ದಾಣ, ಕೆ.ಆರ್.ಸರ್ಕಲ್ ಸೇರಿದಂತೆ ವಿವಿಧೆಡೆ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಲಾಗಿತ್ತು.
ಅನುಮತಿ ಪಡೆಯದೇ ಪೋಸ್ಟರ್ ಗಳನ್ನು ಅಂಟಿಸಿದ್ದಕ್ಕೆ ಹಲಸೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.