ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಡಿ ಖಾನಾಪುರ ತಾಲೂಕಿನ ಪಾರವಾಡ ಗ್ರಾಮದಲ್ಲಿ ಜು. 16ರಂದು ಶನಿವಾರ ಹಮ್ಮಿಕೊಂಡಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದವರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ, ಪರಿಹಾರ ವಿತರಿಸುವ ಹಾಗೂ ಹಾನಿ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಬೇಕಿರುವುದರಿಂದ ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜು.16ರಂದು ನಡೆಯಲಿದ್ದ ‘ಜಿಲ್ಲಾಡಳಿತದ ನಡೆ, ಹಳಳಿಯ ಕಡೆ’ ಅಭಿಯಾನಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಕಂದಾಯ ಇಲಾಖೆ ಉಪಕಾರ್ಯದರ್ಶಿ ನಾಗವೇಣಿ ಎಸ್.ಕೆ. ಸುತ್ತೋಲೆ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾರವಾಡ ಗ್ರಾಮದಲ್ಲಿ ನಡೆಯಲಿದ್ದ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ.
ನಿಡಸೋಸಿ ಶ್ರೀ ಯೋಗಕ್ಷೇಮ ವಿಚಾರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ