Kannada NewsKarnataka NewsLatest

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಚುನಾವಣೆ ಹಠಾತ್ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜೂನ್ 4ರಂದು ನಿಗದಿಯಾಗಿದ್ದ ಬೆಳಗಾವಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಹಠಾತ್ ಮುಂದೂಡಲಾಗಿದೆ.

ಮಂಗಳವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 51 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಜಿಲ್ಲೆಯಲ್ಲಿ ಇನ್ನಷ್ಟು ಕಂಟೈನ್ಮೆಂಟ್ ಝೋನ್ ಆರಂಭವಾಗಿರುವ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡುವ ನಿರ್ಧಾರ ಪ್ರಕಟಿಸಲಾಗಿದೆ.

ಹಲವಾರು ಅಧಿಕಾರಿ, ಸಿಬ್ಬಂದಿ ಕೊರೋನಾ ಕೆಲಸದಲ್ಲಿ ನಿರತರಾಗಿರುವುದರಿಂದ ಸ್ಥಾಯಿ ಸಮಿತಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಹಾಗಾಗಿ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಜೂ.4ಕ್ಕೆ ಜಿ.ಪಂ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆ

Related Articles

Back to top button