ಗೋಡೆ ಕುಸಿದು ಮಹಿಳೆಸಾವು ಪ್ರಕರಣಕ್ಕೆ ಟ್ವಿಸ್ಟ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯನ್ನು ಹತ್ಯೆಗೈದು ಸುಳ್ಳು ಹೇಳಿರುವುದು ಬಯಲಾಗಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆಯ ಹೊನ್ನಮ್ಮನ ಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪತಿ ನಯೀಂ ಪಾಷಾನನ್ನು ಬಂಧಿಸಲಾಗಿದೆ.

Home add -Advt

ಡಿಸೆಂಬರ್ 13ರಂದು ಸಲ್ಮಾಳನ್ನು ಹತ್ಯೆಗೈದು ಬೀಚನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಮನೆ ಗೋಡೆ ಕುಸಿದು ಪತ್ನಿ ಸಲ್ಮಾ ಸಾವನ್ನಪ್ಪಿದ್ದಾಳೆ ಎಂದು ದೂರು ನೀಡಿದ್ದಾನೆ. ಆದರೆ ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದಾಗ ಸತ್ಯಾಂಶ ಬಯಲಾಗಿದೆ. ಪತ್ನಿಯ ಮೇಲೆ ಅನುಮಾನದಿಂದ ಪತಿ ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಸಾಯಿಸಿದ್ದು, ಬಳಿಕ ಆಕೆಯ ಮೃತದೇಹದ ಮೇಲೆ ಗೋಡೆಯನ್ನು ಬೀಳಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

 

Related Articles

Back to top button