*ನಾಳೆ ಬೆಳಗಾವಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುವಿಸಕಂನಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 33 ಕೆ.ವಿ. ಸದಾಶಿವ ನಗರ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್., ಅಲತಗಾ ಹಾಗೂ ಅಂಬೇವಾಡಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದೇ ವ್ಯಾಪ್ತಿಯ ನೀರಾವರಿ ಪಂಪ್‌ಸೆಟ್‌ಗಳಿಗೂ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ. ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಹುವಿಸಕಂನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … Continue reading *ನಾಳೆ ಬೆಳಗಾವಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed