Belagavi NewsBelgaum NewsKannada NewsKarnataka NewsNationalPolitics

*ಜೂನ್ 5 ರಂದು ಬೆಳಗಾವಿಯ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 5 (ಶುಕ್ರವಾರ) ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ವರೆಗೆ 110 ಕೆ.ವಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಪ್ರದೇಶದಲ್ಲಿ ವಿದ್ಯುತ್ ವ್ಯತಯವಾಗಲಿದೆ ಎಂದು 

ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಅಂಗಡಿ ಕಾಲೇಜ್, ಗಣೇಶಪೂರ, ಮಹಾಲಕ್ಷ್ಮೀ ನಗರ, ಆರ್ಮಿ ಕಾಲನಿ, ಕೆ.ಎಚ್.ಬಿ. ಲೇಔಟ್, ಬೆನಕನಹಳ್ಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Home add -Advt

ಅದೇ ರೀತಿಯಾಗಿ ಜೂನ್ 5 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಉಚಗಾಂವ ಉಪಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33 ಕೆ.ವಿ. ಹಿಂಡಲಗಾ ಉಪಕೇಂದ್ರದಿಂದ

ವಿತರಣೆಯಾಗುವ ಹಿಂಡಲಗಾ ಪಂಪ್‌ಹೌಸ್, ಗಣೇಶಪೂರ, ಹಿಂಡಲಗಾ, ಮನ್ನೂರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಗೋಜಗಾ ಹಾಗೂ ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button