Belagavi NewsBelgaum NewsKannada NewsKarnataka NewsNationalPolitics

*ಮಾ.27 ಮತ್ತು 28ರಂದು ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.27, 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 6 ಘಂಟೆಯವರೆಗೆ ಹಾಗೂ ಮಾ.28 ರಂದು ಮಧ್ಯಾಹ್ನ 2 ಘಂಟೆಯಿಂದ ಸಂಜೆ 6 ಘಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

110 ಕೆ.ವಿ ಎಮ್. ಕೆ. ಹುಬ್ಬಳ್ಳಿ ಉಪಕೇಂದ್ರದಿಂದ ಸರಬರಾಜು ಆಗುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಾಡಿಕೊಪ್ಪ, ಜಿಕನೂರ, ಪಾರಿಶ್ವಾಡ, ಇಟಗಿ, ಬೋಗೂರ, ಬೇಡರಹಟ್ಟಿ, ಹಿರೇಹಟ್ಟಿಹೊಳಿ, ಚಿಕ್ಕಹಟ್ಟಿಹೊಳಿ, ಚಿಕನೂರ, ದೇವರಶೀಗಿಹಳ್ಳಿ, ಮಾರ್ಗನಕೊಪ್ಪ, ಕ್ಯಾರಕೊಪ್ಪ ಹಾಗೂ ಕರವಿನಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಬೆಳಗಾವಿ ಗ್ರಾಮೀಣ ವಿಭಾಗ ಕಾ ಮತ್ತು ಪಾ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button