
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆಯೇ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ವಿದ್ಯುತ್ ದರ ಏರಿಕೆ ಮಾಡಲು ನಿರ್ಧರಿಸಿದೆ.
ದೇಶದಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಅಭಾವ ಸೃಷ್ಟಿಯಾಗಿದ್ದು, ಕಲ್ಲಿದ್ದಲು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದಕ್ಕೆ ದುಬಾರಿ ವೆಚ್ಚ ತೆರಬೇಕಾದ ಕಾರಣ ಅದರ ಹೊರೆ ಬಳಕೆದಾರರ ಮೇಲೆ ಬೀಳಲಿದೆ.
ಎನ್ ಟಿಪಿಸಿ ಸೇರಿದಂತೆ ವಿವಿಧ ವಿದ್ಯುತ್ ಸ್ಥಾವರಗಳಿಗೆ ಗುಣಮಟ್ಟದ ಕಲ್ಲಿದ್ದಲು ಅಗತ್ಯವಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಕಲ್ಲಿದ್ದಲು ಆಮದು ಮಾಡಿಕೊಳ್ಳಲು ನಿರ್ಧರಿಸಿದೆ.
ದುಬಾರಿ ಕಲ್ಲಿದ್ದಲು ಖರೀದಿಯಿಂದ ಬಳಕೆದಾರರ ಮೇಲೆ 50ರಿಂದ 80 ಪೈಸೆ ಹೊರೆಬೀಳಲಿದ್ದು, ಸೆಪ್ಟಂಬರ್-ಅಕ್ಟೋಬರ್ ತಿಂಗಳಲ್ಲಿ ಇದು ಜಾರಿಗೆ ಬರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ