Latest

PSI ಹುದ್ದೆ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.

ಈ ಕುರಿತು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್, ರಾಜ್ಯದ ಹಿರಿಯ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿದ್ದಾರೆ. 545 ಪಿಎಸ್ ಐ ಹುದ್ದೆಗಳ ನೇಮಕಕ್ಕೆ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯ ಹಾಗೂ ಲಿಖಿತ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕೆಲ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು.

Home add -Advt

ಅಲ್ಲದೇ ತಾತ್ಕಾಲಿಕ ಆಯ್ಕೆ ಪಟ್ಟಯಲ್ಲಿ ಕಲಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನೊಂದರಿಂದಲೇ 56 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ಅಕ್ರಮ ಆರೋಪಕ್ಕೆ ಪುಷ್ಠಿ ನೀಡಿದಂತಿತ್ತು.

ಇದೀಗ ಆಡಳಿತಾತ್ಮಕ ಕಾರಣಕ್ಕಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದ ವರೆಗೆ ಸ್ಥಗಿತಗೊಳಿಸಲಾಗಿದೆ.
ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ ಕೊಡಿಸಿ

Related Articles

Back to top button