National

*ಪವರ್‌ಲಿಫ್ಟರ್ ಯಷ್ಟಿಕಾ ಆಚಾರ್ಯ ತರಬೇತಿ ವೇಳೆ ಸಾವು*

ಪ್ರಗತಿವಾಹಿನಿ ಸುದ್ದಿ: ಜೂನಿಯ‌ರ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ 17 ವರ್ಷದ ಪವರ್‌ ಲಿಫ್ಟ್ ರ್ ಯಷ್ಟಿಕಾ ಆಚಾರ್ಯ, ರಾಜಸ್ಥಾನದ ಬಿಕಾನೇರ್ ಜಿಲ್ಲೆಯ ಜಿಮ್‌ನಲ್ಲಿ ಅಭ್ಯಾಸದ ಸಮಯದಲ್ಲಿ 270 ಕೆಜಿ ತೂಕ ಕುತ್ತಿಗೆಗೆ ಬಿದ್ದು ಸಾವನ್ನಪ್ಪಿದ್ದಾರೆ.

ನಯಾ ಶಹ‌ರ್ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಜಿಮ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಯಷ್ಟಿಕಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಅವರಿಗೆ ಸಹಾಯ ಮಾಡುತ್ತಿದ್ದ ಅವರ ತರಬೇತುದಾರರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಇಡೀ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಯಷ್ಟಿಕಾ ಆಚಾರ್ಯ ಪವರ್‌ ಲಿಫ್ಟ್ ಮಾಡುತ್ತಿರುವುದನ್ನು ಕಾಣಬಹುದು. ಈ ವೇಳೆ ತರಬೇತುದಾರ ಕೂಡ ಹಿಂದೆ ನಿಂತಿದ್ದರು. ಅಷ್ಟರಲ್ಲಿ, ಭಾರ ಎತ್ತುವಾಗ ಯಷ್ಟಿಕಾ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದು ಸ್ಕ್ಯಾಟ್ ಬಾರ್‌ಗಳು ಆಕೆಯ ಕುತ್ತಿಗೆಯ ಮೇಲೆ ಬಿದ್ದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button