Belagavi NewsBelgaum NewsKarnataka NewsLatestPolitics

*ಬಿಎಸ್‌ವೈ ಅಭಿಮಾನೋತ್ಸವಕ್ಕೆ  ಬೆಳಗಾವಿಯಿಂದ 20 ಸಾವಿರ ಜನ ಭಾಗಿ: ಪ್ರಭಾಕರ ಕೊರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜನ ಸೇವೆಗೆ ಪಾದಾರ್ಪಣೆ ಮಾಡಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಯಲ್ಲಿ ಅಭಿಮಾನೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ 5 ಲಕ್ಷ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ ಎಂದು ಪದ್ಮಶ್ರೀ ಪುರಸ್ಕ್ರತ ಮಾಜಿ ಸಂಸದ ಪ್ರಭಾಕರ ಕೊರೆ ಅವರು ತಿಳಿಸಿದರು.‌

ಮಂಗಳವಾರ ಬೆಳಗಾವಿಯ ಕನ್ನಡ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,  ರೈತ ನಾಯಕ, ಹುಟ್ಟು ಹೋರಾಟಗಾರ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಸಲ್ಲಿಸಲು ಬರುವ ಮಾರ್ಚ್ 9ರಂದು ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಹಮ್ಮಿಕೊಳ್ಳಲಾಗಿದೆ ಎಂದರು.

Home add -Advt

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರುವಲ್ಲಿ ಯಡಿಯೂರಪ್ಪ ಅವರ ಶ್ರಮ ಅಪಾರ. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಬೃಹತ್‌ ಸಮಾವೇಶಕ್ಕೆ ರಾಜ್ಯಾದ್ಯಂತ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಬೆಳಗಾವಿ ಜಿಲ್ಲೆಯಿಂದಲೇ 20 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ವಿಶೇಷವಾಗಿ ಎಲ್ಲಾ ಜಾತಿ ಮತ್ತು ಸಮುದಾಯಗಳ ಮಠಾಧೀಶರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಜಿಲ್ಲೆಯ ಪ್ರತಿಯೊಂದು ಭಾಗದಿಂದಲೂ ಯಡಿಯೂರಪ್ಪ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರಕೋಟೆ ಕಟ್ಟಿದ ಜನನಾಯಕನಿಗೆ ಸಲ್ಲಿಸುವ ಈ ಗೌರವ ಸಮರ್ಪಣೆಯಲ್ಲಿ ಪ್ರತಿಯೊಬ್ಬರೂ ಭಾಗಿಗಳಾಗುವಂತೆ ಅವರು ಆಹ್ವಾನ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನೀಲ ಬೆನಕೆ, ಮಾಜಿ ಸಂಸದೆ ಮಂಗಲ್ ಅಂಗಡಿ, ಮಾಜಿ ಶಾಸಕ ಸಂಜಯ್ ಪಾಟೀಲ್, ಮಾಜಿ ಎಂ.ಎಲ್.ಸಿ ಮಹಾಂತೇಶ್ ಕವಟಗಿಮಠ, ಬಿಜೆಪಿ ನಗರಾಧ್ಯಕ್ಷೆ ಗೀತಾ ಸುತಾರ್, ಸುಭಾಷ್ ಪಾಟೀಲ್, ಮುರುಘಂದ್ರಗೌಡ ಪಾಟೀಲ್  ಉಪಸ್ಥಿತರಿದ್ದರು.

Related Articles

Back to top button