ಆ ಭಾಗದ ರೈತರಿಗೆ ನಿಜವಾಗಿ ನ್ಯಾಯ ಸಿಗಬೇಕೆಂದರೆ ಇನ್ನೊಂದು ಸಕ್ಕರೆ ಕಾರ್ಖಾನೆಯ ಅವಶ್ಯಕತೆ ಇದೆ
ಪ್ರಗತಿವಾಹಿನಿ ಸುದ್ದಿ, ಕಿತ್ತೂರು – ಕಿತ್ತೂರಿನಲ್ಲಿ ಕೆಎಲ್ಇ ಸಂಸ್ಥೆಯಿಂದ ಶಾಲೆ, ಕಾಲೇಜು ಆರಂಭಿಸುವ ಚಿಂತನೆ ನಡೆದಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ತಿಳಿಸಿದ್ದಾರೆ.
ಚನ್ನಮ್ಮನ ಕಿತ್ತೂರು ಐತಿಹಾಸಿಕ ಪ್ರದೇಶ. ಇಲ್ಲಿ ಶಾಲೆಗಳನ್ನು ಕೆಎಲ್ಇ ಸಂಸ್ಥೆಯಿಂದ ಆರಂಭಿಸಲು ಯೋಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಿತ್ತೂರು ಸುತ್ತಮುತ್ತಲಿನ ರೈತರು ತಮ್ಮ ಕಬ್ಬನ್ನು ಮಹಾರಾಷ್ಟ್ರ ಸೇರಿದಂತೆ ಬೇರೆಡೆ ಸಾಗಿಸುತ್ತಿದ್ದಾರೆ. ಹಾಗಾಗಿ ಕಿತ್ತೂರಿನಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿ ಎಂದು ಸ್ಥಳೀಯ ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಕೋರೆ ಸಲಹೆ ನೀಡಿದ್ದಾರೆ.
ಇದರಿಂದಾಗಿ ಸುತ್ತ ಮುತ್ತಲಿನ ಪ್ರದೇಶದಲ್ಲಿ, ಅದರಲ್ಲೂ ವಿಶೇಷವಾಗಿ ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ದೊಡ್ಡ ಸಂಚಲನವೇ ಸೃಷ್ಟಿಯಾಗಿದೆ. ಮೊದಲೇ ಆರ್ಥಿಕ ಸಂಕಷ್ಟದಿಂದ ನಲುಗಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆ, ಕಿತ್ತೂರಿನಲ್ಲಿ ಸಕ್ಕರೆ ಕಾರ್ಖಾನೆ ಆರಂಭವಾದರೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಬಹುದು. ಆದರೆ ಆ ಭಾಗದ ರೈತರಿಗೆ ನಿಜವಾಗಿ ನ್ಯಾಯ ಸಿಗಬೇಕೆಂದರೆ ಇನ್ನೊಂದು ಸಕ್ಕರೆ ಕಾರ್ಖಾನೆಯ ಅವಶ್ಯಕತೆ ಇದೆ.
ನನಗೀಗ 74 ವರ್ಷ ವಯಸ್ಸಾಗಿದೆ. ಸಮಾಜ ಸೇವೆ ಮುಂದುವರಿಸುತ್ತೇನೆ. ಸಮಾಜ ಸೇವೆ ಮಾಡಲು ಅಧಿಕಾರವೇ ಬೇಕಂದೇನೂ ಇಲ್ಲ ಎಂದು ಕೋರೆ ಹೇಳಿದರು.
ಸಂಜಯ್ ಪಾಟೀಲ್ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ