Kannada NewsKarnataka NewsNational

*ಪತ್ರಕರ್ತರ ಸಮಸ್ಯೆಗೆ ಸ್ಪಂಧಿಸಿದ ಪ್ರಭಾಕರ್*

ಪ್ರಗತಿವಾಹಿನಿ ಸುದ್ದಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ ಸಮಸ್ಯೆಯನ್ನು ಬಗೆಹರಿಸುವಂತೆ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು.

ಸುದ್ದಿವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ನಿಗದಿತ ದಾಖಲೆಗಳ ಸಹಿತ ನವೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಾಧ್ಯಮ ಕಿಟ್ ವಿತರಣೆ ಸಂದರ್ಭದಲ್ಲಿ ಕೆಲವರು ಅನಗತ್ಯ ಗೊಂದಲ ಮೂಡಿಸಿದ್ದರು. ಈ ವಿಚಾರವನ್ನು ಪ್ರಭಾಕರ್ ಅವರಿಗೆ ವಿವರಿಸಲಾಯಿತು.

ಪತ್ರಕರ್ತರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೂಡಲೇ ಕಾರ್ಯೋನ್ಮುಖರಾಗಿ ವಾರ್ತಾ ಇಲಾಖೆಯ ಆಯುಕ್ತರ ಜೊತೆಗೆ ಮಾತನಾಡಿ ತಾಂತ್ರಿಕವಾಗಿ ಇದ್ದ ಅಡಚಣೆಯನ್ನು ಬಗೆಹರಿಸಿದರು. ಪರಿಣಾಮವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ತಿಳಿಸಿತು.

Home add -Advt

Related Articles

Back to top button